Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ಸಿದ್ದರಾಮಯ್ಯ ರಾಜೀನಾಮೆ ?

ಬೆಂಗಳೂರು : ಮಂಗಳವಾರ ನಡೆದ ಕ್ಷಿಪ್ರ

ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರದ ನಾಯಕತ್ವ ಬದಲಾಯಿಸಲು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ ಕೈಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಹರಡಿದೆ. 'ಪಕ್ಷ ಈಗಾಗಲೇ ನಿಮಗೆ ಅವಕಾಶ ನೀಡಿದ್ದು, ವಿಪಕ್ಷ ನಾಯಕರಾಗಿದ್ದೀರಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೀರಿ. ಈಗ ಬೇರೆಯವರಿಗೆ ಅವಕಾಶ ನೀಡುವ ಸಮಯ ಬಂದಿದೆ'. ರಾಜ್ಯಸಭಾ ಸದಸ್ಯರಾಗುವ ಆಫರ್ ನ್ನು ಸಹ ರಾಹುಲ್ ನೀಡಿದ್ದಾರೆ.

ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಎಲ್ಲ ಸಚಿವರೊಂದಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಬಳಿಕ ಮಹತ್ವದ ಬೆಳವಣಿಗೆ ನಡೆಯಲಿದೆ.

ದೆಹಲಿಯಲ್ಲಿ ಇಡೀ ದಿನ ನಡೆದ ಸರಣಿ ಸಭೆಯ ಬಳಿಕ ಹೈಕಮಾಂಡ್ ಈ ತೀರ್ಮಾನ ಕೈಗೊಂಡಿದೆ ಎಂದು ಗೊತ್ತಾಗಿದೆ. ರಾತ್ರಿ ಎಂಟೂವರೆಗೆ ವಿಶೇಷ ವಿಮಾನದಲ್ಲಿ ಹೊರಟ ಸಿದ್ದರಾಮಯ್ಯ ಅವರು 11ರ ಸುಮಾರಿಗೆ ಬೆಂಗಳೂರಿಗೆ ತಲುಪಿದರು. ಮೇ 28 ರಂದು ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಂಭವ ಇದೆ ಎಂದು ಗೊತ್ತಾಗಿದೆ.

ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷಗಳ ಬಳಿಕ ಅಧಿಕಾರ ಹಸ್ತಾಂತರದ ಒಪ್ಪಂದವಾಗಿತ್ತು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹರಿದಾಡಿದ್ದವು. ಅಧಿಕಾರಕ್ಕೆ ತ್ಯಾಗಕ್ಕೆ ಒಪ್ಪದ ಸಿದ್ದರಾಮಯ್ಯ ಅವರು, ತಮ್ಮದೇ ಚಾಣಾಕ್ಷ ನಡೆಯಿಂದ ತಮ್ಮ ಅಧಿಕಾರ ಅವಧಿಯನ್ನು ವಿಸ್ತರಿಸಿಕೊಂಡು ಬಂದಿದ್ದರು. ಕೊನೆಗೂ ಅವರನ್ನು ಕುರ್ಚಿಯಿಂದ ಇಳಿಸಲು ಹಾಗೂ ಪಕ್ಷ ಕಷ್ಟದಲ್ಲಿದ್ದಾಗ ಆಸರೆಯಾಗಿ ನಿಂತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧರಿಸಿದೆ.

ಹಾಗಿದ್ದರೂ, ಸಿದ್ದರಾಮಯ್ಯ ಅವರು ಪದತ್ಯಾಗ ಮಾಡಿದ ಬಳಿಕ ನಡೆಯಬಹುದಾದ ರಾಜಕೀಯ ವಿದ್ಯಮಾನ ಹಾಗೂ ಸ್ಥಿತ್ಯಂತರಗಳು ಸರ್ಕಾರದ ಮುಂದಿನ ನಾಯಕತ್ವ ಯಾರದ್ದು ಎಂಬುದನ್ನು ನಿರ್ಧರಿಸುವ ಸಾಧ್ಯತೆಯೂ ಇದೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೇ 20ಕ್ಕೆ ಮೂರು ವರ್ಷ ಪೂರೈಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ