Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಶ್ವತವಾಗಿ ಇತಿಹಾಸದ ಪುಟ ಸೇರಲಿದೆಯೇ ಕೆಜಿಎಫ್ ಚಿನ್ನದ ಗಣಿ

 

ಕೋಲಾರ:
ಜಿಲ್ಲೆಯ ರಾಬರ್ಟ್‌ಸನ್‌ಪೇಟೆ ತಾಲೂಕಿನಲ್ಲಿರುವ ಈ ಚಿನ್ನದ ಗಣಿ ವಿಶ್ವದಲ್ಲೇ ಅತ್ಯಂತ ಪ್ರಸಿದ್ಧ ಚಿನ್ನದ ಗಣಿಯಾಗಿದೆ. ಜಿಲ್ಲಾ ಕೇಂದ್ರದಿಂದ ಇದು ಸುಮಾರು 30 ಕಿ.ಮೀ. ದೂರದಲ್ಲಿದ್ದು, ಇದನ್ನು 17-18 ನೇ ಶತಮಾನದ ನಡುವೆ ಪ್ರಾರಂಭಿಸಲಾಗಿತ್ತು. ಆ ನಂತರ 121 ವರ್ಷಗಳಲ್ಲಿ ಇಲ್ಲಿಂದ 900 ಟನ್ ಚಿನ್ನವನ್ನು ಹೊರತೆಗೆಯಲಾಗಿದೆ.

ಈ ಕೆಜಿಎಫ್ ಚಿನ್ನದ ಗಣಿ ದೇಶದ ಅತ್ಯಂತ ಹಳೆಯ ಚಿನ್ನದ ಗಣಿಗಳಲ್ಲಿ ಒಂದಾಗಿದೆ. ಆದರೆ ಇದೀಗ ಶಾಶ್ವತವಾಗಿ ಇತಿಹಾಸದ ಪುಟ ಸೇರಲಿದೆ ಅಂತೆ ಕೆಜಿಎಫ್ ಚಿನ್ನದ ಗಣಿ.

ಚಿನ್ನದ ಗಣಿಯ ಕೇಂದ್ರದ ಗುತ್ತಿಗೆ ಅವಧಿ ಮುಕ್ತಾಯವಾಗಿದ್ದು, ಪುನರಾರಂಭಕ್ಕೆ ಕೇಂದ್ರ ನಿರಾಸಕ್ತಿ ತಾಳಿದೆ. ರಾಜ್ಯ ಸರ್ಕಾರಕ್ಕೆ ಭೂಮಿಯನ್ನು ಹಿಂತಿರುಗಿಸುವ ಪ್ರಕ್ರಿಯೆಯನ್ನೂ ಕೇಂದ್ರ ಗಣಿ ಇಲಾಖೆ ಆರಂಭಿಸಿದೆ. 2001 ರ ಫೆಬ್ರವರಿಯಲ್ಲಿ ಕೆಜಿಎಫ್ ಚಿನ್ನದ ಗಣಿಗೆ ಅಧಿಕೃತವಾಗಿ ಬೀಗ ಹಾಕಲಾಗಿತ್ತು. ನಂತರ ಚಿನ್ನದ ಗಣಿ ಪುನರಾರಂಭ ಮಾಡುವ ಬಗ್ಗೆ ಸತತ 22 ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಆದರೆ, ಈಗ ಅದೂ ಕೊನೆಗೊಂಡಿದೆ.

ಕೆಜಿಎಫ್​ ಚಿನ್ನದ ಗಣಿಯ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗುತ್ತಿಗೆ ಅವಧಿ 2023ರ ಆಗಸ್ಟ್​​ಗೆ ಮುಕ್ತಾಯವಾಗಲಿದೆ. ಹೀಗಾಗಿ 12,500 ಎಕರೆ ಪ್ರದೇಶವನ್ನು ರಾಜ್ಯ ಸರ್ಕಾರಕ್ಕೆ ಹಿಂದುರುಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮಧ್ಯೆ, ಚಿನ್ನದ ಅದಿರು ತೆಗೆದು ಹಾಕಲಾಗಿರುವ ಸೈನೆಡ್ ಮಿಶ್ರಿತ ಮಣ್ಣಿನ ಗುಡ್ಡಗಳನ್ನು ಶೋಧಿಸಿ ಚಿನ್ನ ತೆಗೆಯಲು ಕೇಂದ್ರ ಸರ್ಕಾರ ಗ್ಲೋಬಲ್ ಟೆಂಡರ್ ಕರೆದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ