Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ತೆಕ್ಕೆಗೆ ಯಲ್ಲಮ್ಮ ಪುರಸಭೆ

ಸವದತ್ತಿ: ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಇದೀಗ ಶಾಸಕ ವಿಶ್ವಾಸ ವೈದ್ಯ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತೆಕ್ಕೆಗೆ ಮರಳಿದೆ. ಹಲವು ತಿಂಗಳಿಂದ ತೆರವಾಗಿದ್ದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು.

2ನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ 'ಅ' ವರ್ಗ ಮಹಿಳೆ ಮೀಸಲಾತಿ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷ ಸ್ಥಾನಕ್ಕೆ ದಾವಲಬಿ ಸನದಿ ಅವರು ನಾಮಪತ್ರ ಸಲ್ಲಿಸಿದ್ದರು. ಶಾಸಕರು, ಸಂಸದರು ಹಾಗೂ 27 ಸದಸ್ಯ ಬಲದ ಮತದಾನದಲ್ಲಿ ಸಂಸದ ಸೇರಿ ನಾಲ್ವರು ಗೈರು ಹಾಜರಾಗಿದ್ದರು. ನಿಗದಿತ ಅವಧಿಯಲ್ಲಿ ಬೇರೆ ನಾಮಪತ್ರ ಸಲ್ಲಿಕೆಯಾಗದ ಕಾರಣ ನಾಮಪತ್ರ ಸಲ್ಲಿಸಿದ್ದ ಚಿನ್ನವ್ವ ಹುಚ್ಚಣ್ಣವರ ಅವರನ್ನು ಅಧ್ಯಕ್ಷರನ್ನಾಗಿ, ದಾವಲಬಿ ಸನದಿ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಎಂ.ಎನ್. ಹೆಗ್ಗನ್ನವರ ಘೋಷಿಸಿದರು.

ಶಾಸಕ ವಿಶ್ವಾಸ್‌ ವೈದ್ಯ ಮಾತನಾಡಿ, ಶಾಸಕನಾದ ಬಳಿಕ ಪುರಸಭೆಯ ಆಡಳಿತವನ್ನು ಕಾಂಗ್ರೆಸ್ ಪಕ್ಷ ತನ್ನ ಮುಡಿಗೇರಿಸಿಕೊಂಡಿದೆ. ಎರಡು ದಶಕಗಳಿಂದ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷ ಇದೀಗ ಅಧಿಕಾರಕ್ಕೇರಿದೆ. ಇದು ಕಾರ್ಯಕರ್ತರಿಗೆ ಹಾಗೂ ವೈಯಕ್ತಿಕವಾಗಿ ಅತೀವ ಸಂತಸ ತಂದಿದೆ. ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪುನಃಶ್ಚತನಗೊಳಿಸಿ ಎಲ್ಲ ಆಡಳಿತದಲ್ಲಿಯೂ ಪಕ್ಷವನ್ನು ಆಡಳಿತಕ್ಕೆ ತರಲಾಗುವುದು. ಇದೇ ಉತ್ಸಾಹದಿಂದ ಕಾರ್ಯಕರ್ತರು ಮುಂಬರುವ ಚುನಾವಣೆಗಳಲ್ಲಿ ವಿಜಯ ಗಳಿಸಲಿ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ನಗರದ ಅಭಿವದ್ಧಿಯತ್ತ ಗಮನಹರಿಸಬೇಕು. ಜನರ ಆಶೋತ್ತರಗಳಿಗೆ ಧ್ವನಿಯಾಗಬೇಕು ಎಂದರು.
ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಯನ್ನು ಶಾಸಕ ವಿಶ್ವಾಸ ವೈದ್ಯ ಅವರು ಅಭಿನಂದಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಯಿತು. ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ