Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾಹಿತ್ಯ ಸಮ್ಮೇಳನಕ್ಕೆ ಯಮಕನಮರಡಿ ಸಜ್ಜು

ಬೆಳಗಾವಿ: ಭಾನುವಾರ (ಫೆ.23) ನಡೆಯಲಿರುವ ಹುಕ್ಕೇರಿ ತಾಲೂಕು ಮಟ್ಟದ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಮಕನಮರಡಿ ಗ್ರಾಮ ಸಜ್ಜಾಗಿದೆ.

ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯದಲ್ಲಿ ತೊಡಗಿರುವ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಕನ್ನಡ ಬಾವುಟಗಳನ್ನು ಅಳವಡಿಸಲಾಗಿದ್ದು, ಗಡಿಯಲ್ಲಿ ಕನ್ನಡಮಯ ವಾತಾವರಣ ನಿರ್ಮಾಣವಾಗಿದೆ.

ಬೆಳಗ್ಗೆ10ಕ್ಕೆ ಹುಣಸಿಕೊಳ್ಳ ಮಠದಲ್ಲಿ ನಡೆಯುವ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು. ಶಾಸಕ ನಿಖಿಲ ಕತ್ತಿ ಗ್ರಂಥ ಬಿಡುಗಡೆಗೊಳಿಸುವರು. ನಿಡಸೋಸಿಯ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಉಪಸ್ಥಿತರಿರುವರು.

ನಂತರ ಎರಡು ವಿಚಾರ ಗೋಷ್ಠಿಗಳು, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಇಲ್ಲಿ ಚಿತ್ರಕಲೆ, ಪುಸ್ತಕಗಳು ಹಾಗೂ ಸ್ವಸಹಾಯ ಸಂಘಗಳು ಸಿದ್ಧಪಡಿಸಿ ವಸ್ತುಗಳ ಪ್ರದರ್ಶನವೂ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಹುಕ್ಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ ಅವಲಕ್ಕಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ