Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 13 ರಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಡುಪಿ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ,ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಸೆಪ್ಟೆಂಬರ್ 14 ರಂದು ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬೆಳಗಾವಿ, ಗದಗ, ರಾಯಚೂರು, ಯಾದಗಿರಿ ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ದೇಶದ ಹಲವು ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಪೈಕಿ ದಕ್ಷಿಣ ಭಾರತದ ರಾಜ್ಯಗಳಾದ ತೆಲಂಗಾಣ, ಕೇರಳ ಹಾಗೂ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಈ ಮೂರು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ತಮಿಳುನಾಡಿನ ಹಲವು ಭಾಗದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ