Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬ್ರಹ್ಮೋಸ್ ಸಾಮರ್ಥ್ಯದ ಬಗ್ಗೆ ಪಾಕ್ ಪ್ರಜೆಗಳನ್ನು ಒಮ್ಮೆ ಕೇಳಿ: ಯೋಗಿ ಆದಿತ್ಯನಾಥ

ಲಖನೌ: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್ ಕ್ಷಿಪಣಿಯ ಶೌರ್ಯದ ಒಂದು ನೋಟವನ್ನು ಮಾತ್ರ ನೋಡಲಾಗಿದೆ. ಮತ್ತಷ್ಟು ಮಾಹಿತಿ ತಿಳಿಯಬೇಕಿದ್ದರೆ, ಪಾಕಿಸ್ತಾನಿ ಪ್ರಜೆಗಳನ್ನು ಒಮ್ಮೆ ಕೇಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ತಯಾರಿಕಾ ಘಟಕವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಡಿಯೊ ಕಾನ್ನರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಯೋಗಿ, 'ಬ್ರಹ್ಮೋಸ್ ಕ್ಷಿಪಣಿ ಎಂದರೇನು?, ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ನೀವು (ದೇಶದ ಜನರು) ಬ್ರಹ್ಮೋಸ್ ಕ್ಷಿಪಣಿಯ ಶೌರ್ಯದ ಒಂದು ನೋಟವನ್ನು ಮಾತ್ರ ನೋಡಿದ್ದೀರಿ. ಕ್ಷಿಪಣಿ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯಬೇಕಿದ್ದರೆ, ಪಾಕಿಸ್ತಾನಿ ಪ್ರಜೆಗಳನ್ನು ಒಮ್ಮೆ ಕೇಳಿ' ಎಂದು ಹೇಳಿದ್ದಾರೆ.

ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧಕ್ಕೆ ಸಮವಾದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಅವರು (ಮೋದಿ) ತೆಗೆದುಕೊಂಡ ನಿರ್ಣಯಗಳಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಯೋಗಿ ತಿಳಿಸಿದ್ದಾರೆ.

ನಾವು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಹತ್ತಿಕ್ಕುವವರೆಗೆ, ಈ ಸಮಸ್ಯೆಗೆ ಯಾವುದೇ ಪರಿಹಾರವಿಲ್ಲ. ಇದನ್ನು ಹತ್ತಿಕ್ಕುವ ಸಮಯ ಬಂದಿದೆ. ಈ ಉದ್ದೇಶ ಈಡೇರಬೇಕಾದರೆ, ಇಡೀ ದೇಶವು ಒಂದೇ ಧ್ವನಿಯಲ್ಲಿ ಮೋದಿಯವರ ನಾಯಕತ್ವದಲ್ಲಿ ಒಂದಾಗಬೇಕಾಗಿದೆ ಎಂದು ಯೋಗಿ ಕರೆ ನೀಡಿದ್ದಾರೆ.

ಭಯೋತ್ಪಾದನೆ ಎಂಬುದು ನಾಯಿಯ ಬಾಲವಿದ್ದಂತೆ. ಅದನ್ನು ಎಂದಿಗೂ ನೇರಗೊಳಿಸಲು ಸಾಧ್ಯವಿಲ್ಲ. ಭಯೋತ್ಪಾದನೆ ಮಟ್ಟಹಾಕಲು ನಾವು ಅದರದೇ ಭಾಷೆಯಲ್ಲಿ ಉತ್ತರ ನೀಡಬೇಕಿದೆ. ಆದೇ ರೀತಿಯಲ್ಲಿ ಭಾರತವು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಮೂಲಕ ಜಗತ್ತಿಗೆ ಸಂದೇಶವನ್ನು ನೀಡಿದೆ ಎಂದು ಯೋಗಿ ಪ್ರತಿಪಾದಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ