Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಯೂನಸ್ ಪ್ರಮಾಣ

ಢಾಕಾ: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ (84) ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಗುರುವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ಯಾರಿಸ್‌ನಲ್ಲಿದ್ದ ಯೂನಸ್ ಅವರು ಢಾಕಾಗೆ ಗುರುವಾರ ಮರಳಿದರು. ಅವರಿಗೆ 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿತ್ತು.

ಬಾಂಗ್ಲಾದೇಶದ ಅಧ್ಯಕ್ಷರ 'ಬಂಗಭವನ'ದಲ್ಲಿ ನಡೆದ ಸಮಾರಂಭದಲ್ಲಿ, ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್‌ ಅವರು ಯೂನಸ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

'ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತೇನೆ ಮತ್ತು ರಕ್ಷಿಸುತ್ತೇನೆ' ಎಂದು ಯೂನಸ್ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೇಳಿದರು.

ಇದೇ ವೇಳೆ, ಯೂನಸ್ ನೇತೃತ್ವದ ಸಂಪುಟದ ಸಲಹೆಗಾರರಾಗಿ 12ಕ್ಕೂ ಹೆಚ್ಚು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ವಿದ್ಯಾರ್ಥಿಗಳ ಹೋರಾಟದ ನಾಯಕರಾದ ನಹೀದ್ ಇಸ್ಲಾಂ ಮತ್ತು ಆಸಿಫ್ ಮೊಹಮ್ಮದ್ ಹಾಗೂ ಮಾಜಿ ವಿದೇಶಾಂಗ ಕಾರ್ಯದರ್ಶಿ ತೌಹೀದ್ ಹುಸೇನ್, ಮಾಜಿ ಅಟಾರ್ನಿ ಜನರಲ್ ಹಸನ್ ಆರಿಫ್‌ ಪ್ರಮುಖರು.

ರಾಜಕೀಯ ಮುಖಂಡರು, ಸೇನೆಯ ಅಧಿಕಾರಿಗಳು ಮತ್ತು ರಾಜತಾಂತ್ರಿಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಮೀಸಲಾತಿ ನೀತಿ ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾಚಾರದ ಬೆನ್ನಲ್ಲೇ, ಪ್ರಧಾನಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದ ಶೇಖ್ ಹಸೀನಾ ಅವರು ದೇಶ ತೊರೆದಿದ್ದರು. ಬಳಿಕ ಆರ್ಥಿಕ ತಜ್ಞ ಯೂನಸ್‌ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮಂಗಳವಾರ ನೇಮಿಸಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ