ಮಂಗಳೂರು :
ಸುಳ್ಯ ತಾಲ್ಲೂಕು ಬೆಳ್ಳಾರೆಯಲ್ಲಿ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ನಾಲ್ವರು ಪ್ರಮುಖ ಆರೋಪಿಗಳ ಪತ್ತೆಗೆ ಎಲ್ಲ ಎನ್ ಐಎ 5 ಲಕ್ಷ ₹ಮತ್ತು ಇನ್ನಿಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ₹ ನಗದು ಬಹುಮಾನ ನೀಡುವುದಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.
ಪ್ರಕರಣ ಬೆಳಕಿಗೆ ಬಂದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪೋಲಿಸರು ನಿರಂತರ ಶೋಧ ಕಾರ್ಯ ನಡೆಸಿದ್ದರೂ ಇವರು ಪತ್ತೆಯಾಗುತ್ತಿಲ್ಲ. ಹೀಗಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಗಳಾದ ಮಹಮದ್ ಮುಸ್ತಾಫ್ ಬೆಳ್ಳಾರೆ, ತುಫೈಲ್ ಮಡಿಕೇರಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ₹ ನೀಡಲಾಗುವುದು. ಉಮರ್ ಫಾರೂಕ್ ಮತ್ತು ಅಬೂಬಕರ್ ಸಿದ್ದಿಕಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 2 ಲಕ್ಷ ₹ ನೀಡಲಾಗುತ್ತದೆ. ಜುಲೈ 26 ರಂದು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಅವರ ಕೋಳಿ ಅಂಗಡಿಯ ಬಳಿ ಹಂತಕರು ಭೀಕರವಾಗಿ ಕೊಲೆಗೈದು ಪರಾರಿಯಾಗಿದ್ದರು.