ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರ ಸ್ವಾಮಿಯವರು ಸೋಲು ಕಂಡಿದ್ದರಿಂದ ಅದನ್ನು ಅರಗಿಸಿಕೊಳ್ಳಲಾಗದೆ ಕಟ್ಟಾ ಅಭಿಮಾನಿ ಒಬ್ಬ ಆತ್ಮಹತ್ಯೆ ಪ್ರಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಮಪುರ ನಿವಾಸಿ ಮಂಜುನಾಥ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಬರೆದಿಟ್ಟು ಬಳಿಕ ವಿಷ ಸೇವಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದ್ದು ಸದ್ಯ ಮಂಜುನಾಥ ಪ್ರಾಣಾಪಾಯದಿಂದ ಪಾರಾಗಿದ್ದಾನೆ.