ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಹುಕ್ಕೇರಿ ಬಿಜೆಪಿ ಶಾಸಕ ನಿಖಿಲ್ ಕತ್ತಿ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಸಂಜೆ ಅವರು ರಾಜೀನಾಮೆ ನೀಡಿದ್ದು ಕೆಲಸದ ಒತ್ತಡದಿಂದ ಹಾಗೂ ಹುಕ್ಕೇರಿ ಮತ ಕ್ಷೇತ್ರದ ಜನರ ಕೆಲಸ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಕಾರ್ಖಾನೆಯ ಅಧ್ಯಕ್ಷ ಸ್ಥಾನ ನಿಭಾಯಿಸಲು ತೊಂದರೆ ಆಗುತ್ತಿರುವುದರಿಂದ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 23ರಂದು ಕಾರ್ಖಾನೆ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಕಾರ್ಖಾನೆಯನ್ನು ಲೀಸ್ ಆಧಾರದ ಮೇಲೆ ಖಾಸಗಿಯವರಿಗೆ ನಡೆಸಲು ಕೊಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ಆಡಳಿತ ಮಂಡಳಿಯ ಹೆಚ್ಚಿನ ಸದಸ್ಯರಿಂದ ವಿರೋಧ ವ್ಯಕ್ತವಾಗಿತ್ತು. ಅಂದಿನಿಂದ ಸಾರ್ವಜನಿಕ ವಲಯದಲ್ಲಿ ಈ ಕುರಿತು ಚರ್ಚೆಗಳು ಆರಂಭವಾಗಿದ್ದು ಈ ನಡುವೆ ಶುಕ್ರವಾರ ನಿಖಿಲ್ ಕತ್ತಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ.