ಬೆಳಗಾವಿ :ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರನ್ನು ರಾಜ್ಯ ಸರಕಾರ ಇದೀಗ ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರ ನಿವೃತ್ತಿಯಿಂದ ತೆರವಾಗಿರುವ ಈ ಸ್ಥಾನಕ್ಕೆ ಹೆಚ್ಚುವರಿಯಾಗಿ ನಿತೇಶ ಪಾಟೀಲ ಆಯುಕ್ತರಾಗಿ ಕಾರ್ಯ ನಿರ್ವಹಿಸಲಿದ್ದಾರೆ.ಹಿರೇಮಠ ಅವರ ನಿವೃತ್ತಿ ನಂತರ ಹಿರಿತನ ಆಧಾರದ ಮೇಲೆ ಬಾಗಲಕೋಟೆ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಅವರು ಪ್ರಭಾರ ವಹಿಸಿಕೊಂಡಿದ್ದರು. ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಬೆಳಗಾವಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರಿಗೆ ಪ್ರಭಾರ ವಹಿಸಿದೆ