ಬೆಳಗಾವಿ :
ಬೆಳಗಾವಿ ತಾಲೂಕಿನಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಕೂಡಲೇ ನೋಂದಣಿ ಮಾಡಲು ಸೂಚಿಸಲಾಗಿದೆ.
ಈಗಾಗಲೇ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಛೇರಿ, 1, 2, 3 ಮತ್ತು 4ನೇ ವೃತ್ತ ಬೆಳಗಾವಿ ಇಲ್ಲಿಗೆ ಸಂಪರ್ಕಿಸಿ, ನೋದಾಯಿಸಿಕೊಳ್ಳಬಹುದಾಗಿದೆ.
ಕಾರ್ಮಿಕ ನಿರೀಕ್ಷಕರ ಕಛೇರಿ ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ್ ಬೈಲಹೊಂಗಲ, ಸವದತ್ತಿ ಮತ್ತು ರಾಮದುರ್ಗ ಕಛೇರಿಗಳಲ್ಲಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.
ಸಂಸ್ಥೆಗಳು 15 ದಿನಗಳ ಒಳಗಾಗಿ ರಾಜ್ಯ ಸರ್ಕಾರದ ಇ-ತಂತ್ರಾಂಶ https://www.ekarmika.karnataka.gov.in/ekarmika/static/Home aSDX_ಆನಲೈನ್ ಮೂಲಕ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ, ನೋಂದಣಿ ಪತ್ರ ಪಡೆದುಕೊಳ್ಳಬಹುದಾಗಿದೆ ಎಂದು ಬೆಳಗಾವಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.