ಬೆಂಗಳೂರು:
ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ಜಾರಿ ಮಾಡಿದೆ.
ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ನೋಟಿಸ್ನಲ್ಲಿ ಸೂಚಿಸಲಾಗಿದೆ. ಪಕ್ಷ ಸಾಕಷ್ಟು ಬಾರಿ ಸೂಚಿಸಿದರೂ ಕೂಡ ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸ್ ನೀಡಿದೆ.
ಇತ್ತೀಚಿಗೆ ನಳಿನಕುಮಾರ ಕಟೀಲು ವಿರುದ್ಧ ಕಿಡಿಕಾರಿದ್ದ ರೇಣುಕಾಚಾರ್ಯ, ಅವರ ಅಧ್ಯಕ್ಷತೆಯಲ್ಲಿ ಬಿಜಿಪಿ ಹೀನಾಯವಾಗಿ ಸೋಲು ಕಂಡಿದೆ. ಇದರಿಂದ ಅವರು ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಹಿರಂಗವಾಗಿಯೇ ಆಗ್ರಹಿಸಿದ್ದರು. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಕೆಲ ನಾಯಕರ ಮೇಲೆ ಹೊಂದಾಣಿಕೆಯ ಆರೋಪ ಮಾಡಿದ್ದರು. ಇದಲ್ಲದೆ ಕೆಲ ನಾಯಕರು ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದರು.