ಬೀದರ: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದ ಘಟನೆ ಬೀದರಿನ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ.
ಎಸ್ಬಿಐ ಬ್ಯಾಂಕ್ ಮತ್ತು ಎಟಿಎಂಗೆ ಹಣ ತುಂಬಿಸುವ ಸಂದರ್ಭದಲ್ಲಿ ಈ ದರೋಡೆ ನಡೆದಿದೆ. ಬ್ಯಾಂಕ್ಗೆ ಹಣ ತುಂಬಿಸುವುದಕ್ಕೆ ಸಿಬ್ಬಂದಿ ಬಂದ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಿ, ಹಣ ದೋಚಿ ದುರೋಡೆಕೋರರು ಪರಾರಿಯಾಗಿದ್ದಾರೆ.
ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ ನಂತರ ಅವರ ಮೇಲೆ ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗುಂಡಿನ ದಾಳಿಯಲ್ಲಿ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಿರಿ ವೆಂಕಟೇಶ್ (ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ.ಇದೇ ಜಾಗದಲ್ಲೇ ಜಿಲ್ಲಾಧಿಕಾರಿಗಳ ಕಚೇರಿಯೂ ಇದೆ.
ಎಂದಿನಂತ ಬ್ಯಾಂಕ್ ಹಾಗೂ ಎಟಿಎಂಗೆ ಹಣ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಪಿಎಸ್ಸಿ ವಾಹನ ಸಿಬ್ಬಂದಿ ಹಣ ತೆಗೆದುಕೊಂಡು ಬಂದಾಗ ಹಿಂಬಾಲಿಸಿದ್ದ ದರೋಡೆಕೋರರು ವಾಹನದ ಸಿಬ್ಬಂದಿ ಮೇಲೆ ಕಾರದ ಪುಡಿ ಎರಚಿದ್ದಾರೆ. ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು ಮತ್ತೋರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಅಲ್ಲದೆ, ಸುಮಾರು 93 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.