ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪಟಾಕಿ ಅವಘಡ ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಆಗಕೂಡದು. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.