ಅಥಣಿ :
ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಅಲಗೂರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ನಾವು ನೀಡಿರುವ ಹೇಳಿಕೆಗೆ ಸಂಬಂಧಿಸಿದ ಯಾರು ಸಹಾ ಅನ್ಯತಾ ಭಾವಿಸಬಾರದು. ಲಕ್ಷ್ಮಣ್ ಸವದಿ ಅವರು ಪಂಚಮಸಾಲಿ ಸಮಾಜಕ್ಕೆ ಬಹಳ ಒಳ್ಳೆಯ ಕಾರ್ಯಗಳನ್ನು ಮಾಡಿದ್ದಾರೆ. ಸಮುದಾಯದ ಜನರ ಸೇವೆಯನ್ನು ಅವರು ಮಾಡಿದ್ದಾರೆ. ಹೀಗಾಗಿ ಅವರಿಗೆ ಸದಾ ನಮ್ಮ ಬೆಂಬಲ, ಆಶೀರ್ವಾದ ಇದ್ದೇ ಇರುತ್ತದೆ ಎಂದು ಶ್ರೀಗಳು ಲಕ್ಷ್ಮಣ ಸವದಿ ಅವರ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.