ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.
ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರ. ಇದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಿಎಂಗೆ ಸಂಬಂಧಿಸಿದ್ದು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ತನಿಖೆ ಪೂರ್ಣಗೊಳ್ಳುವವರೆಗೆ, ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯವರಿಗಾಗಲಿ, ಉಪ ಮುಖ್ಯಮಂತ್ರಿಯವರಿಗಾಗಲಿ, ನನಗಾಗಲೀ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪೊಲೀಸರು ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ ಜರುಗಿಸುತ್ತಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯ ಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಅನಂತರ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನು ತಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರುದಾರ ಮಹಿಳೆ ಕಳೆದ 2015 ರಿಂದಲೂ ಈವರೆಗೂ 53 ಕೇಸ್ ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ದೂರು ನೀಡಿದ್ದ
ನೀಡಿದ್ದಾರೆ ಎಂದು ತಿಳಿಸಿದರು.