ಬೆಳಗಾವಿ :
ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವುಗಳನ್ನು ಹೊರಗಿನ ಪ್ರಪಂಚಕ್ಕೆ ಪರಿಚಯಿಸುವುದಕ್ಕೆ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಬುಧವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಜಿಲ್ಲಾ ಮಟ್ಟದ ಕಲಿಕಾ ಹಬ್ಬ 2023ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಾಲಕರು ಅತ್ಯಂತ ಕಾಳಜಿಯಿಂದ ಮಕ್ಕಳನ್ನು ಬೆಳೆಸುತ್ತಾರೆ. ಶಿಕ್ಷಕರು ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡುತ್ತಾರೆ. ವಿವಿಧ ಕಾರ್ಯಕ್ರಮಗಳನ್ನು ಹಾಗೂ ಸ್ಫರ್ಧೆಗಳನ್ನು ಏರ್ಪಡಿಸುವ ಮೂಲಕ ಪ್ರತಿಭೆಗಳು ಹೊರಗೆ ಬರಲು ಮತ್ತು ಬೆಳೆಯಲು ಅವಕಾಶವಾಗುತ್ತದೆ. ಪಾಲಕರು ಮತ್ತು ಶಿಕ್ಷಕರು ಇಬ್ಬರೂ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಕಾಳಜಿಯಿಂದ ಮಾಡಬೇಕು ಎಂದು ಚನ್ನರಾಜ ಹಟ್ಟಿಹೊಳಿ ಸಲಹೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ್ಯಾಂತ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ್ಯಾಂತ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ, ಹಳೆಯ ಶಾಲೆಗಳ ದುರಸ್ತಿ, ಶಾಲೆಗಳಿಗೆ ಪೇಂಟಿಂಗ್ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ಗಳ ನಿರ್ಮಾಣ ಮತ್ತಿತರ ಕಾರ್ಯಗಳನ್ನು ಈಗಾಗಲೇ ಪೂರ್ಣಗೊಳಿಸಿದ್ದಾರೆ. ಬರುವ ದಿನಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಗಮನವನ್ನು ಹರಿಸಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿಡಿಪಿಆಯ್ ಬಸವರಾಜ ಎಮ್ ನಾಲತವಾಡ್, ಡಿವೈಪಿಸಿ ಬಿ ಎಚ್ ಮಿಲ್ಲಾನಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಶಿಕ್ಷಣಾಧಿಕಾರಿಗಳಾದ ಎಲ್ ಎಸ್ ಹಿರೇಮಠ, ಎಸ್ ಪಿ ದಾಸಪ್ಪನವರ, ಬಸವರಾಜ ಥೋರ್ಲಿ, ರೇಣುಕಾ ಕುರುಬರ, ಪ್ರಶಾಂತ ಕಲ್ಲನಾಚೆ, ಬಾಳು ಕುರಂಗಿ, ಮಹಾನಂದಾ ಮರಿಕಟ್ಟಿ, ಮಾರುತಿ ಚಿಂಗಳಿ, ಸಾಗರ ಕುರಂಗಿ ಹಾಗೂ ಗ್ರಾಮದ ಪ್ರಮುಖರು, ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.