ಬೆಂಗಳೂರು :
ಕರ್ನಾಟಕದ ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ನಾಳೆಯಿಂದ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಕನ್ನಡದಲ್ಲೂ ತೋರಿಸಲಾಗುತ್ತದೆ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಹಿಂದಿ ಹೇರಿಕೆ ಆರೋಪ ಮತ್ತು ಕರ್ನಾಟಕದಲ್ಲಿ ಶೇ.60 ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಹೋರಾಟ ನಡೆಯುತ್ತಿರುವ ನಡುವೆ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹರ್ದೀಪ್ ಸಿಂಗ್ ಪುರಿ, ಪೆಟ್ರೋಲ್ ಬಂಕ್ಗಳಲ್ಲಿ ದರ ಪಟ್ಟಿ ಕನ್ನಡದಲ್ಲಿ ಇರಲಿದೆ. ಕನ್ನಡದಲ್ಲಿ ದರ ಪಟ್ಟಿ ಪ್ರಕಟಿಸುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಯೋಧ್ಯೆಯಲ್ಲಿ ರಾಮಲಲ್ಲಾನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದ್ದು, ಈ ದಿನದಂದು ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ರಾಮ ಹಾಗೂ ಆಂಜನೇಯನ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿರುವುದನ್ನು ಸ್ವಾಗತಿಸಿದ ಕೇಂದ್ರ ಸಚಿವರು, ಈ ಮೂಲದ ಸನಾತನ ಸಂಸ್ಕತಿ ಕಾಂಗ್ರೆಸ್ ಕೊನೆಗೂ ಒಪ್ಪಿಕೊಂಡಿದೆ ಎಂದು ಹೇಳಿದರು.