ಅಹಮದಾಬಾದ್:
2023ರ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ಗೆ ಮಳೆ ಅಡ್ಡಿಪಡಿಸಿದ್ದು, ಪಂದ್ಯವನ್ನು ಮೇ 29(ಸೋಮವಾರ)ಕ್ಕೆ ಮುಂದೂಡಲಾಗಿದೆ.
ನಿರಂತರವಾಗಿ ಮಳೆ ಸುರಿದ ಕಾರಣ ಪಂದ್ಯವನ್ನು ಮುಂದೂಡಲಾಗಿದೆ.
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ನಾಲ್ಕು ಬಾರಿ ಕಪ್ ಜಯಿಸಿರುವ ಚೆನ್ನೈ ಸೂಪರ್ಕಿಂಗ್ಸ್ ಮುಖಾಮುಖಿಯಾಗಿವೆ.