ಬೆಳಗಾವಿ :
ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಪಂಚಮಸಾಲಿ ಸಮಾಜ ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು,
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.13ರಂದು ಬೆಳಗಾವಿಯಲ್ಲಿ ಪ್ರತಿಭಟನೆಗೆತೀರ್ಮಾನಿಸಿದ್ದೇವೆಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಅಂದು ಗಾಂಧಿ ಭವನದಿಂದ ಚನ್ನಮ್ಮನ ವೃತ್ತದವರೆಗೆ ಪಾದಯಾತ್ರೆ ನಡೆಸಲಾಗುವುದು. ಅಗತ್ಯವಿದ್ದರೆ ಸುವರ್ಣ ವಿಧಾನಸೌಧದವರೆಗೂ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಮುದಾಯದ ಸಚಿವರು ಮತ್ತು ಶಾಸಕರು ನಮ್ಮ ಬೇಡಿಕೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಬೆಳಗಾವಿಯಲ್ಲಿ ಸಭೆ ನಡೆಸಬೇಕೆಂದು ಕೋರಿದ್ದರು. ಆದರೆ, ಮುಖ್ಯಮಂತ್ರಿ ಬೆಂಗಳೂರಿನಲ್ಲಿ ಸಭೆ ನಡೆಸಲು ಒಲವು ತೋರಿದ್ದಾರೆ. ಅವರು ಡಿ. 13ರೊಳಗೆ ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರ ಸಭೆ ಕರೆದು, ಮೀಸಲಾತಿ ನೀಡುವ ಕುರಿತು ಅಂತಿಮ ನಿರ್ಧಾರ ಪ್ರಕಟಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.