ನವದೆಹಲಿ:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪ್ರಕಾಶ ಹುಕ್ಕೇರಿ ಇದೀಗ ತಮ್ಮ ಪಕ್ಷ ತೆಗೆದುಕೊಂಡು ನಿರ್ಧಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮಾಜಿ ಸಂಸದರು ಆಗಿರುವ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷ ಹಠಾತ್ತನೇ ತೆಗೆದುಕೊಂಡಿರುವ ಗೆಲುವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎಚ್.ಕೆ. ಪಾಟೀಲ್ ಬದಲಾವಣೆಗೆ ದೆಹಲಿ ವಿಶೇಷ ಪ್ರತಿನಿಧಿಯೂ ಆಗಿರುವ ಪ್ರಕಾಶ ಹುಕ್ಕೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೂತನ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಳರ್ ಅವರನ್ನು ಬದಲಾವಣೆ ಮಾಡದಿದ್ದರೆ ತಾನು ರಾಜೀನಾ ಮೆ ನೀಡಲು ಸಿದ್ಧ ಎಂದಿದ್ದಾರೆ. ದೆಹಲಿಯಲ್ಲಿ ಗುರುವಾರ ಸಚಿವ ಸತೀಶ ಜಾರಕಿಹೊಳಿ ಬಳಿ ಅವರು ಅಸಮಾಧಾನ ತೋಡಿಕೊಂಡಿದ್ದಾರೆ. ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರೋಣ ಎಂದು ಜಾರಕಿಹೊಳಿಯವರು ಹುಕ್ಕೇರಿಯವರನ್ನು ಸಮಾಧಾನಪಡಿಸಿದರು ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಲೋಕ ಸಭಾ ಕ್ಷೇತ್ರದ ಉಸ್ತುವಾರಿ ಸಚಿವರನ್ನು ನೇಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್ರನ್ನು ಬದಲಿಸಿ ಚಿಕ್ಕೋಡಿಗೆ ಲಕ್ಷ್ಮಿ ಹೆಬ್ಬಾಳ್ಳರ್ ಅವರನ್ನು ನೇಮಿಸಿದ್ದರು. ಇದು ಈಗ ಪ್ರಕಾಶ ಹುಕ್ಕೇರಿ ಅವರ ಬೇಸರಕ್ಕೆ ಕಾರಣವಾಗಿದೆ.