ಬೆಂಗಳೂರು :
ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಅವರ ಜಾಗಕ್ಕೆ ಸಿದ್ದಲಿಂಗ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಇಂದು (ಜುಲೈ 30) ಪ್ರಮೋದ್ ಮುತಾಲಿಕ್ ನಿವೃತ್ತಿ ಘೋಷಿಸಿದ್ದು, ಕರ್ನಾಟಕ ಶ್ರೀ ರಾಮಸೇನೆಯ ರಾಜ್ಯಾದ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ಕರ್ನಾಟಕದ ಶ್ರೀರಾಮಸೇನೆ ರಾಜ್ಯಾಧ್ಯಕ್ಷರಾಗಿ ಗಂಗಾಧರ ಕುಲಕರ್ಣಿ ಅವರನ್ನು ನೇಮಕ ಮಾಡಿ ಪ್ರಮೋದ್ ಮುತಾಲಿಕ ಘೋಷಣೆ ಮಾಡಿದರು.
ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಸಿದ್ಧಲಿಂಗ ಸ್ವಾಮಿ, ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಅಲ್ಲಾಡಿತ್ತೋ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಹಿನಾಯವಾಗಿ ಸೋಲು ಅನುಭವಿಸಿದಾಗ ಬಿಜೆಪಿಗೆ ಕಾರ್ಯಕರ್ತರು ಮತ್ತು ಹಿಂದುತ್ವದ ಬೆಲೆ ಗೊತ್ತಾಗಿದೆ ಎಂದರು.