ಬೆಳಗಾವಿ: ಇಲ್ಲಿನ ಭಡಕಲ್ ಗಲ್ಲಿಯ ಬನಶಂಕರಿ ದೇವಸ್ಥಾನದ ಸಭಾಭವನದಲ್ಲಿ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರಿ ಸಂಘದ 13ನೇ ವಾರ್ಷಿಕ ಸಾಮಾನ್ಯ ಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಸೆ.14ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಅತಿಥಿಯಾಗಿ ರಾಜ್ಯ ಸಹಕಾರ ಪತ್ತಿನ ಸಂಘದ ನಿರ್ದೇಶಕ ಸಂಜಯ ಹೊಸಮಠ ಆಗಮಿಸುವರು. ಸೊಸೈಟಿ ಚೇರ್ಮನ್ ನಾರಾಯಣ ನಾಯ್ಕ ಅಧ್ಯಕ್ಷತೆ ವಹಿಸುವರು. ಪ್ರತಿಭಾವಂತ ವಿದ್ಯಾರ್ಥಿಗಳು, ಸಾಧಕರನ್ನು ಸತ್ಕರಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ವಿಶಾಲ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರ ಸಮಾರಂಭ ರವಿವಾರ
