ಬೆಂಗಳೂರು:
ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದೆ. ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ವಿಶೇಷ ಸಮಿತಿ ಸಿದ್ಧಪಡಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ.
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿ-ಐಜಿಪಿ ಸುಧೀರ್ಕುಮಾರ್ ಸಕ್ಸೆನಾ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿ.ಜಿ ತಾಜ್ ಹಸನ್ ಅವರ ಹೆಸರು ಪಟ್ಟಿಯಲ್ಲಿದೆ.
ಪ್ರಧಾನಿ ನೇತೃತ್ವದಲ್ಲಿ ರಚನೆಗೊಂಡಿದ್ದ ಸಮಿತಿ ಈ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಪಟ್ಟಿಯನ್ನು ಸಚಿವ ಸಂಪುಟಕ್ಕೆ ಕಳುಹಿಸಲಾಗಿದೆ.