ಬೆಳಗಾವಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಬೆಳಗಾವಿ ಜಿಲ್ಲಾ ಘಟಕವು ಬಸವ ಜಯಂತಿಯ ಅಂಗವಾಗಿ ಪೂರ್ವಭಾವಿ ಸಭೆಯನ್ನು ಫೆಬ್ರವರಿ 28 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ವೈಭವದಿಂದ ಆಚರಿಸುವ ಉದ್ದೇಶದಿಂದ ಬೆಳಗಾವಿಯ ಎಲ್ಲ ಬಸವ ಸಂಘಟನೆಗಳಿಗೆ ಕರೆ ನೀಡಿದೆ. ಸಭೆಯಲ್ಲಿ ಜಯಂತಿ ಆಚರಣೆಯ ರೂಪರೇಷೆಗಳು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಉಪನ್ಯಾಸಗಳು, ಸಮಾಜಮುಖಿ ಚಟುವಟಿಕೆಗಳು ಹಾಗೂ ವಿವಿಧ ಸಮಿತಿಗಳ ರಚನೆ ಕುರಿತು ಚರ್ಚಿಸಲಾಗುವುದು. ಮಹಾತ್ಮ ಬಸವಣ್ಣವರ ತತ್ವಗಳು ಹಾಗೂ ಸಂದೇಶಗಳನ್ನು ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಆಚರಣೆಯನ್ನು ವಿಶೇಷವಾಗಿ ಆಯೋಜಿಸಲು ಉದ್ದೇಶಿಸಲಾಗಿದೆ. ಬೆಳಗಾವಿ ಎಲ್ಲ ವೀರಶೈವ ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಬಹುಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು” ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


