ಬೆಂಗಳೂರು:
ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಕಾವೇರಿ ನೀರು ಕಡ್ಡಾಯವಾಗಿ ಬಿಡುವಂತೆ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಬೆಂಗಳೂರು ಬಂದ್ ಗೆ ಸಿದ್ಧತೆ ನಡೆದಿದೆ.
ಈಗಾಗಲೇ ಆಮ್ ಆದ್ಮಿ ಪಕ್ಷ (AAP), ರಾಜ್ಯ ಕಬ್ಬು ಬೆಳೆಗಾರರ ಸಂಘ, ಜಯಕರ್ನಾಟಕ ಸಂಘಟನೆ, ಕನ್ನಡ ಚಳುವಳಿ ಕೇಂದ್ರ ಸಮಿತಿ, ಬಿಬಿಎಂಪಿ (BBMP) ನೌಕರರ ಕ್ಷೇಮಾಭಿವೃದ್ಧಿ ಸಂಘ, ತಲಕಾಡು ಸಂಶೋಧಕರ ಸಂಘ, ರಾಷ್ಟ್ರೀಯ ಚಾಲಕರ ಒಕ್ಕೂಟ, ಕನ್ನಡಪರ ಹೋರಾಟಗಾರರ ಸಂಘ, ಕೆಂಪೇಗೌಡ ಸಮಿತಿ, ರಾಜಸ್ಥಾನಿ ಭಾಷಿಕರ ಸಂಘ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಹತ್ತಕ್ಕಿಂತ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು ಸೆಪ್ಟೆಂಬರ್ 26ರಂದು ಬಂದ್ ಗೆ ಕರೆ ನೀಡಲಾಗಿದೆ.