ಚೆನ್ನೈ:
ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭಾನುವಾರ ಚೆನ್ನೈಗೆ ಭೇಟಿ ನೀಡಿದ್ದ ಅವರು ಬಿಜೆಪಿ ಮುಖಂಡರ, ಕಾರ್ಯಕರ್ತರ ಗೋಪ್ಯ ಸಭೆಯನ್ನು ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು ‘ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದೆಂದು’ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕು. ಆ ನಿಟ್ಟಿನಲ್ಲಿ ಬೂತ್ ಕಮೀಟಿಗಳನ್ನು ಬಲಪಡಿಸಬೇಕು ಎಂದು ಶಾ ಕರೆ ನೀಡಿದ್ದಾರೆ.