ದೆಹಲಿ : ಅಮೇರಿಕಾ ಅಧ್ಯಕ್ಷೀಯ ಚುನಾವಣಾ ಗೆಲುವಿಗಾಗಿ ‘ಸ್ನೇಹಿತ’ ಟ್ರಂಪ್ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ‘ಜಾಗತಿಕ ಶಾಂತಿಯನ್ನು ಉತ್ತೇಜಿಸಲು ಕೆಲಸ ಮಾಡೋಣ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ಮೋದಿ ಬುಧವಾರ ಅಭಿನಂದಿಸಿದ್ದಾರೆ. ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಅವರು ಬರೆದಿದ್ದಾರೆ, “ನಿಮ್ಮ ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ಒಟ್ಟಾಗಿ, ನಮ್ಮ ಜನರ ಒಳಿತಿಗಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಕೆಲಸ ಮಾಡೋಣ ಎಂದು ಶುಭ ಕೋರಿದ್ದಾರೆ.
ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್ ಎರಡನೇ ಬಾರಿಗೆ ಆಯ್ಕೆ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.
ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ.
ಭಾರೀ ಪೈಪೋಟಿ ಬಳಿಕ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದಿಕ್ಕಿದ್ದಾರೆ. ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.