ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಂಬಂಧ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ನವರಾತ್ರಿ ಮುನ್ನದಿನದಂದು ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ. ಜತೆಗೆ ನಾಳೆಯಿಂದ (ಸೆಪ್ಟೆಂಬರ್ 22) ಉತ್ಪನ್ನಗಳ ಮೇಲಿನ ಜಿಎಸ್ಟಿ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.