ಬೆಳಗಾವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಬುಧವಾರ ಬೆಳಗಾವಿಯಲ್ಲಿ ಹೆಸ್ಕಾಂ ಅಧೀಕ್ಷಕರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ನೀರಾವರಿ ಪಂಪ್ ಸೆಟ್ ಗೆ ಆಧಾರ್ ಸಂಖ್ಯೆ ಜೋಡಣೆ ಆದೇಶವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ವಿದ್ಯುತ್ ವಲಯದ ಖಾಸಗಿಕರಣಕ್ಕೆ ಮುಂದಾಗಿರುವ ಕೇಂದ್ರ ಸರಕಾರ ಮತ್ತು ಪಂಪ್ ಸೆಟ್ ಗಳ ವಿದ್ಯುತ್ ಮೀಟರಿಗೆ ಆಧಾರ್ ಸಂಖ್ಯೆ ಜೋಡಿಸುತ್ತಿರುವ ರಾಜ್ಯ ಸರ್ಕಾರದ ನೀತಿ ವಿರುದ್ಧ ಘೋಷಣೆ ಕೂಗಿದರು.
ವಿದ್ಯುತ್ ಅವಘಡದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಸೋಲಾರ್ ಸಂಪರ್ಕ ಹೊಂದುವ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಆದೇಶವನ್ನು ತಕ್ಷಣ ಕೈಬಿಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ತಾರತಮ್ಯ ಮಾಡದೆ ಸಮಾನವಾಗಿ ವಿದ್ಯುತ್ ಪೂರೈಸಬೇಕು. ಜೊತೆಗೆ ಹೆಚ್ಚುತ್ತಿರುವ ವಿದ್ಯುತ್ ಶುಲ್ಕವನ್ನು ಇಳಿಸಬೇಕು ಎಂದು ಒತ್ತಾಯಿಸಿದರು.