ಬೆಳಗಾವಿ : ವಸತಿ ಶಾಲೆಯ ಮೊದಲನೇ ಮಹಡಿಯಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು ಈಗ ಅನುಮಾನಗಳಿಗೆ ಕಾರಣವಾಗಿದೆ. ಹಿರೇಕೋಡಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ವಸತಿ ಶಾಲೆಯ ಮೊದಲನೇ ಮಹಡಿಯಿಂದ ಆಪ್ರೀನ್ ಜಮಾದಾರ 17 ಮೃತ ದುರ್ದೈವಿ ವಿದ್ಯಾರ್ಥಿನಿ. ಮೃತ ಬಾಲಕಿ ಗೋಕಾಕ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿ.
ಪರೀಕ್ಷೆ ಹಿನ್ನೆಲೆಯಲ್ಲಿ ಮದ್ಯ ರಾತ್ರಿ ಮೊದಲ ಮಹಡಿಯಲ್ಲಿ ಓದುತ್ತ ಕುಳಿತಿದ್ದ ವಿದ್ಯಾರ್ಥಿನಿ ನಂತರ ಕಟ್ಟಡದ ಬದಿಗೆ ಬಂದಾಗ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿತ್ತು. ವಿದ್ಯಾರ್ಥಿನಿಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಪೋಷಕರು ಬಾಲಕಿಯ ಸಾವಿನ ಬಗ್ಗೆ ಈಗ ತಕರಾರು ಎತ್ತಿದ್ದಾರೆ.
ರಾತ್ರಿ ಸಮಯ 2:30 ಕ್ಕೆ ವಿದ್ಯಾರ್ಥಿನಿ ಹಾಸ್ಟೆಲ್ನಿಂದ ಬಿದ್ದಿದಾಳೆ ಎಂದು ಹಾಸ್ಟೆಲ್ ಸಿಬ್ಬಂದಿ ತಿಳಿಸುತ್ತಿದ್ದಾರೆ. ಆದರೆ ನಮಗೆ ಬೆಳಗಿನ ಜಾವ 4 ಗಂಟೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಾವು ಹುಡುಗಿಯ ಶವ ನೋಡಿದಾಗ ತಲೆ ಸೇರಿದಂತೆ ಕಿವಿಯಲ್ಲಿಯೂ ರಕ್ತಸ್ರಾವ ಆಗಿದೆ.
ಇದು ಸಹಜ ಸಾವಲ್ಲ ಎನ್ನುತ್ತಿರುವ ವಿದ್ಯಾರ್ಥಿನಿಯ ಪೋಷಕರು ಆಕೆಯ ಸಾವಿನ ಬಗ್ಗೆ ನೋವು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಾರೆ ವಿದ್ಯಾರ್ಥಿನಿ ಸಾವು ಆಕೆಯ ಸ್ನೇಹಿತೆಯರು ಮತ್ತು ಪೋಷಕರಿಗೆ ತೀವ್ರ ಅಘಾತಕ್ಕೆ ಕಾರಣವಾಗಿದೆ.