ಬೆಂಗಳೂರು:
ಗಣನೀಯವಾಗಿ ಮರಾಠಿ ಮಾತನಾಡುವ ಜನರು ವಾಸಿಸುವ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಪ್ರದೇಶದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಎನ್ ಸಿಪಿ ತನ್ನ ಬೆಂಬಲ ಘೋಷಣೆ ಮಾಡಿದೆ.
ಆದರೆ ಇದೀಗ ಬಿಜೆಪಿ ಟಿಕೆಟ್ ದೊರೆಯದೆ ನಿರಾಶರಾಗಿರುವ ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಅವರು ಶರದ ಪವಾರ್ ಅವರ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಸೇರ್ಪಡೆಗೊಂಡಿದ್ದಾರೆ. ರಾಣೆಬೆನ್ನೂರು ಮತ ಕ್ಷೇತ್ರದಲ್ಲಿ ಹಾಲಿ ಶಾಸಕ ಅರುಣ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರಿಂದ ಬೇಸತ್ತ ಶಂಕರ್ ಇದೀಗ ಎನ್ ಸಿಪಿ ಸೇರ್ಪಡೆಗೊಂಡಿದ್ದಾರೆ. ಕರ್ನಾಟಕದ ಚುನಾವಣೆಯಲ್ಲಿ ಎನ್ಸಿಪಿ 40 ರಿಂದ 45 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ.