ಕೋಲಾರ :
ಕಾಂಗ್ರೆಸ್ ಯುವರಾಜ ಎಂದೇ ಖ್ಯಾತರಾಗಿರುವ ರಾಹುಲ್ ಗಾಂಧಿ ಅವರ ಕೋಲಾರ ಕಾರ್ಯಕ್ರಮ ಸತ್ಯಮೇವ ಜಯತೆ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ.
ಏ.10 ರಂದು ಕೋಲಾರದಲ್ಲಿ ಕಾರ್ಯಕ್ರಮ ನಡೆಯಬೇಕಾಗಿತ್ತು. ಆದರೆ ಇದೀಗ ಈ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಅವರು ಕೋಲಾರದಲ್ಲಿ ಕಳೆದ ಲೋಕಸಭಾ ಚುನಾವಣೆ ಪ್ರಚಾರ ಭಾಷಣದಲ್ಲಿ ತೀವ್ರವಾಗಿ ಟೀಕಿಸಿ ಮೋದಿ ಉಪನಾಮದ ಬಗ್ಗೆ ವ್ಯಂಗ್ಯವಾಡಿದ್ದರು. ಇದಕ್ಕಾಗಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಮತ್ತೆ ಕೋಲಾರಕ್ಕೆ ಆಗಮಿಸಿ ರಣಕಹಳೆ ಮೊಳಗಿಸಲು ಮುಂದಾಗಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ರಾಹುಲ್ ಗಾಂಧಿ ಅವರ ಭಾಷಣ ಕೇಳಲು ಕಾತರರಾಗಿದ್ದರು. ಆದರೆ, ಇದೀಗ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ.