ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಿದೆ.