ಬೆಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 30ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಶನಿವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.