ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ :
ಕೊಡಗು ಜಿಲ್ಲೆಯಲ್ಲಿ ಮುಂದಿನ 2 ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಬುಧವಾರ (ಜು.31) ರಜೆ ಘೋಷಿಸಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಜುಲೈ 31ರಂದು ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್. ಆರ್. ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ವಿಪರೀತ ಸುರಿಯುತ್ತಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರ (ಜು.31) ರಜೆ ಘೋಷಿಸಿ ತಹಶೀಲ್ದಾರ್ಗಳು ಆದೇಶಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜುಲೈ 31) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.