ಬೆಳಗಾವಿ :
ಇಲ್ಲಿಯ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಜಿಯಾನಾ ಜಾರ್ಜ್ ಮತ್ತು ಬಿ. ಮೋಹನ ಗೌಡ ರಾಷ್ಟ್ರೀಯ ಮಟ್ಟದ ಕಾನೂನು ರಸಪ್ರಶ್ನೆ ಸ್ಪರ್ಧೆ ಲೆಕ್ಸ್ ಅಲ್ಟಿಮಾ 2023 ರಲ್ಲಿ 2000 ರೂಪಾಯಿ ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಪಡೆದರು. ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ವತಿಯಿಂದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಸಾಧನೆಗೆ
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಚಾರ್ಯ ಡಾ. ಹೆಚ್ ಹವಾಲ್ದಾರ್, ಮೂಟ್ ಕೋರ್ಟ್ ಸಂಯೋಜಕಿ ಪ್ರಾಧ್ಯಾಪಕಿ ಅಶ್ವಿನಿ ಪರಬ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ತಂಡವನ್ನು ಅಭಿನಂದಿಸಿದರು.