ಬೆಂಗಳೂರು:
ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ.
ರಜನೀಶ್ ಗೋಯಲ್ ಅವರು ಸದ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದು, ಅದರ ಜೊತೆಗೆ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.