ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ ಅರ್ಜಿಗಳನ್ನೂ ಸಲಹಾ ಸಮಿತಿ ಪರಿಶೀಲಿಸಲಿದೆ.
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ. ಬದಲಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಚಿಸುವ ವಿಶೇಷ ಸಮಿತಿಗಳು ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿವೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ. ಈ ವರ್ಷ ಸುಮಾರು 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ : ಆನ್ ಲೈನ್ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ
