ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲಿಯೇ, ಅದು ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ಆ ಮೂಲಕ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ನೀಡಿದೆ.
ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ರಾಸಲೀಲೆ ಪ್ರಕರಣದ ಆರೋಪವನ್ನು ಡಿಜಿಪಿ ರಾಮಚಂದ್ರರಾವ್ ಅಲ್ಲಗಳೆದಿದ್ದು, ಈ ವಿಡಿಯೋ ನೋಡಿ ನನಗೆ ಶಾಕ್ ಆಗಿದೆ. ಇದರಲ್ಲಿರುವ ಮಹಿಳೆ ಯಾರೆಂಬುದು ನನಗೆ ಗೊತ್ತಿಲ್ಲ. ಇದು ತಿರುಚಿದ ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ರಾಮಚಂದ್ರ ರಾವ್ ಹೇಳಿದ್ದರು.


