ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ಹೆಸರು ಪಡೆಯಲಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದೆ ಅಂತ ತಿಳಿಸಿದರು. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ ಎಂದು ವಿವರಣೆ ನೀಡಿದರು.