ನವದೆಹಲಿ:
ಚುನಾವಣೆ ಸನಿಹದಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿಗೆ ದೊಡ್ಡ ಉತ್ತೇಜನವಾಗಿ ಶುಕ್ರವಾರ (ಮಾರ್ಚ್ 31) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಶನಿವಾರ ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರಿದರು.
ಒಂದು ವರ್ಷದ ಹಿಂದೆ ಜೆಡಿಎಸ್ ನಾಯಕತ್ವದೊಂದಿಗೆ ವಿವಿಧ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದ ರಾಮಸ್ವಾಮಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಅಂತಿಮವಾಗಿ ಶುಕ್ರವಾರ (ಮಾರ್ಚ್ 31) ಅವರು ಶುಕ್ರವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಬಿಜೆಪಿ ಕೆಲಸ ಮಾಡುವ ರೀತಿಯಿಂದ ನಾನು ನಿಜವಾಗಿಯೂ ಪ್ರಭಾವಿತನಾಗಿದ್ದೇನೆ. ನಾನು ಹಣ ಬಲಕ್ಕೆ ಬಲಿಯಾಗಿದ್ದೇನೆ. ಏಕೆಂದರೆ ನಾನು ಯಾವಾಗಲೂ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೇನೆ. ಯಾವುದೇ ಷರತ್ತುಗಳಿಲ್ಲದೆ ಬಿಜೆಪಿಗೆ ಸೇರುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ರಾಮಸ್ವಾಮಿ ಹೇಳಿದ್ದಾರೆ.
ಹಾಸನ ಜೆಡಿಎಸ್ ಭದ್ರಕೋಟೆ. ಏಳು ವಿಧಾನಸಭಾ
ಪೈಕಿ ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿತ್ತು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಹೊರತುಪಡಿಸಿ ಉಳಿದ ಏಕೈಕ ಶಾಸಕ ಬಿಜೆಪಿಯ ಪ್ರೀತಂ ಗೌಡ.
ಎ.ಟಿ.ರಾಮಸ್ವಾಮಿ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರ ಸೇರ್ಪಡೆಯೊಂದಿಗೆ, ಬಿಜೆಪಿ ಪಕ್ಷವು ಎರಡನೇ ಸ್ಥಾನದ ಮೇಲೆ ಕಣ್ಣಿಟ್ಟಿದೆ ಮತ್ತು ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಅವರ ಪ್ರಭಾವವನ್ನು ಬಳಸಲು ಯೋಜಿಸುತ್ತಿದೆ.
ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಮಾಜಿ ನಾಯಕ ಎ.ಮಂಜು ಅವರಿಗೆ ಜೆಡಿಎಸ್ ಈಗಾಗಲೇ ಅರಕಲಗೂಡು ಟಿಕೆಟ್ ಘೋಷಿಸಿದೆ. ಅರಸೀಕೆರೆಯ ಮತ್ತೊಬ್ಬ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕೂಡ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.