ದೆಹಲಿ :
ಕೆಲ ದಿನಗಳ ಹಿಂದೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪ ಮಾಡಿದ್ದರು.
ಅದರ ಮುಂದುವರಿದ ಭಾಗವಾಗಿ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ರಮೇಶ ಜಾರಕಿಹೊಳಿ ಸಮಯ ಕೋರಿದ್ದಾರೆ. ತಮ್ಮ ಆಪ್ತರ ಜೊತೆ ಬುಧವಾರ ದೆಹಲಿಗೆ ತೆರಳಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ದಾಖಲೆಗಳ ಬಗ್ಗೆ ಅಮಿತ ಶಾ ಅವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ವಾರದ ಅವಧಿಯಲ್ಲಿ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಆರೋಪದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸುವ ಸಾಧ್ಯತೆ ಇದೆ.