ದೆಹಲಿ :
ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇದು ಮುಂದೆ ಕರ್ನಾಟಕ ರಾಜಕೀಯ ರಣರಂಗದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆ ಇದೆ.
ಗುರುವಾರ ರಾತ್ರಿಯೇ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ರಮೇಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೂರಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ, ಸಾಕ್ಷಿಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿಬಿಐಗೆ ಪ್ರಕರಣ ಒಪ್ಪಿಸಿವಂತೆ ಮನವರಿಕೆ ಮಾಡಿದ್ದಾರೆ.