ಬೆಳಗಾವಿ :
ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ಬೆಳಗಾವಿಯು ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಮಹಿಳಾ ಉದ್ದಿಮೆದಾರರ ಬಳಗದವರಿಂದ ಗೃಹ ಕೈಗಾರಿಕೆಯಲ್ಲಿ ತಯಾರಾದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆಯನ್ನು ಸೋಮವಾರ ಜ. 9 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಗರದ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದೆ.
ಮೇಳವನ್ನು ರಾಣಿ ಚನ್ನಮ್ಮಾ ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಆಶಾ ಪ್ರಭಾಕರ ಕೋರೆ ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಿಳಾ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.