ಖಾನಾಪುರ: ಖಾನಾಪುರ ತಾಲೂಕಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ಖಾನಾಪುರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ ಕೊಚೇರಿ, ಖಾನಾಪುರ ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಸಂಜಯ್ ಕುಬಲ್, ಲೈಲಾ ಶುಗರ್ ಎಂಡಿ ಸದಾನಂದ ಪಾಟೀಲ, ತಾಲೂಕು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮಾರಿಹಾಳ, ಸಿದ್ದು ಪಾಟೀಲ, ರವಿ ಪಾಟೀಲ, ಉಮೇಶ ಹಂದಾರೆ ಉಪಸ್ಥಿತರಿದ್ದರು.