ಮಂಗಳೂರು :
ಹತ್ತು ವರ್ಷಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ, ಖಡಕ್ ಅಧಿಕಾರಿ ಎಂದೇ ಹೆಸರುವಾಸಿಯಾಗಿದ್ದ ರವಿಕುಮಾರ್ ಎಂ.ಆರ್. ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.
ಡಾ.ಕೆ.ವಿ. ರಾಜೇಂದ್ರ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ರವಿಕುಮಾರ್ ಇದೀಗ ಹೊಸ ಜಿಲ್ಲಾಧಿಕಾರಿಯಾಗಿದ್ದಾರೆ ಅವರು 2012 ರ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಆಗಿದ್ದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳ ರಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ದಶಕಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಅಗಲೀಕರಣಕ್ಕೆ ಯಾವುದೇ ಒತ್ತಡ ಬಂದರೂ ಮಣಿಯದೆ, ವಿಶಾಲ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿ ಬೆಳಗಾವಿಯ ಜನರ ಪ್ರೀತಿಗೆ ಪಾತ್ರರಾಗಿದ್ದು ಇತಿಹಾಸ.