ಬೆಳಗಾವಿ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಬೆಳಗಾವಿ ಪ್ರಾದೇಶಿಕ ಎಸ್ ಪಿ ಆಗಿ ರವೀಂದ್ರ ಗಡಾದಿ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನವರಾದ ಗಡಾದಿ ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳಗಾವಿ ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ