ಬೆಳಗಾವಿ: ಬೆಳಗಾಂ ಶುಗರ್ಸ್ ವತಿಯಿಂದ ಸೆ.29 ಹಾಗೂ 30 ರಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಕಾರ್ಯ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ( ಡಿಜಿಸಿಎ) ಕಚೇರಿಯು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಬೆಳಗಾಂ ಶುಗರ್ಸ್ ಮೋಡ ಬಿತ್ತನೆಗೆ ಮುಂದಾಗಿದೆ.
ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ.
ಸೆ.29 ಹಾಗೂ 30 ರಂದು ಮಧ್ಯಾಹ್ನ 1 ರಿಂದ 4 ಗಂಟೆಯವರೆಗೆ ಜಿಲ್ಲೆಯ ಆಗಸದಲ್ಲಿ ಮೋಡ ಬಿತ್ತನೆ ನಡೆಯಲಿದೆ.
ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ.
ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಸಿದ್ಧ…! ಸೆ.29 -30 ಮ. 1 – 4 ಗಂಟೆವರೆಗೆ
